ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಆಯತಪ್ಪಿ ಮರದಿಂದ ಬಿದ್ದು ಸಾವು.


ಬಂಟ್ವಾಳ: ನಾವೂರ ಎಂಬಲ್ಲಿ ತೆಂಗಿನಕಾಯಿ ಕೀಳುವ
ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು
ಸಾವನ್ನಪ್ಪಿದ ಘಟನೆ ನಡೆದಿದೆ.ನಾವೂರ ಸೂರ ನಿವಾಸಿ ಸುರೇಶ್ (40) ಮೃತಪಟ್ಟ ವ್ಯಕ್ತಿ.
ಸುರೇಶ್ ಅವರು ಹಲವಾರು ವರ್ಷಗಳಿಂದ
ತೆಂಗಿನಕಾಯಿ, ಅಡಿಕೆ ಮರದಿಂದ ಕಾಯಿ ಕೀಳುವ
ಕೆಲಸ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳಲು ಅದೇ ಊರಿನ ಒಂದು ಮನೆಗೆ ಹೋಗಿದ್ದರು.
ತೋಟದಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ
ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದಿದ್ದರು.
ಇನ್ನು ಮರದಿಂದ ಕೆಳಗೆ ಬಿದ್ದು ಗಂಭೀರವಾಗಿ
ಗಾಯಗೊಂಡ ಅವರನ್ನು ಕೂಡಲೇ ಬಂಟ್ವಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿನ ವೈದ್ಯರು ಪರೀಕ್ಷಿಸಿ ಗಂಭೀರ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಹೋಗಲು ಸೂಚಿಸಿದ್ದು ಮಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ರಾಜ್ಯ