ರಾಜ್ಯ

ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು; ಟ್ರಕ್ ಬೆಂಕಿಗೆ ಆಹುತಿ

ಕಾಪು: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ‌. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ.

ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ.
ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ ಘಟನೆ‌ ಸಂಭವಿಸಿದೆ.
ಟ್ರಕ್ ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯ ಮರುಕ್ಷಣ ಟ್ರಕ್ ನಲ್ಲೂ ಬೆಂಕಿ ಕಾಣಿಸಿಕೊಂಡಿದ್ದು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಮದ್ಯರಾತ್ರಿ ಘಟನೆ ಸಂಭವಿಸಿದ ಕಾರಣ ತುರ್ತು ಪರಿಹಾರ ಕಾರ್ಯಾಚರಣೆ ನಡೆಸಲು ಸಾಧ್ಯವಾಗದೇ ಬೆಂಕಿಗೆ ಆಹುತಿಯಾಗುವಂತಾಗಿದೆ.ಕಾಪು‌ ಪೊಲೀಸರು ಸ್ಥಳಕ್ಕೆ ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Response

error: Content is protected !!