ರಾಜ್ಯ

ಉಡುಪಿ ವಿಡಿಯೋ ಪ್ರಕರಣ – ಎಬಿವಿಪಿಯಿಂದ ಪ್ರತಿಭಟನೆ: ಸ್ಥಳದಲ್ಲಿ ಭಿಗುವಿನ ವಾತಾವರಣ.


ಉಡುಪಿ ಜುಲೈ 27 : ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂ ನಲ್ಲಿ ವಿಧ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು.


ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಕರಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರ, ಸಂತ್ರಸ್ತೆ ವಿಧ್ಯಾರ್ಥಿನಿಗೆ ನ್ಯಾಯ ಒದಗಿಸಿ ಕೊಡಬೇಕು ಹಾಗೂ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರುವಂತೆ ಪಟ್ಟುಹಿಡಿದ ವಿಧ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ವಾಗ್ವಾದ ಏರ್ಪಟ್ಟಿದ್ದು, ಸ್ವತಃ ಶಾಸಕ ಯಶಪಾಲ್ ಸುವರ್ಣ ಅವರು ವಿಧ್ಯಾರ್ಥಿಗಳನ್ನು ಪೊಲೀಸರಿಂದ ಬಿಡಿಸಲು ಹರಸಾಹಸಪಟ್ಟರು.

ಬಳಿಕ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರರವರು ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿದರು. ಈಗಾಗಲೇ ಪ್ರಕರಣ ತನಿಖೆ ಹಂತದಲ್ಲಿ ಇದ್ದು, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು ಎಂದರು.

Leave a Response

error: Content is protected !!