ರಾಜ್ಯ

ಉಗ್ರರಿಗೆ ಹಣಕಾಸಿನ ನೆರವು – ಬಂಟ್ವಾಳ ಪುತ್ತೂರಿನ ಹಲವೆಡೆ ಎನ್ಐಎ ದಾಳಿ.

ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾನುವಾರ ಸಂಜೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಂಬ್ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಬಂಟ್ವಾಳ, ಪುತ್ತೂರಿನಲ್ಲಿ ಹಲವು ಮನೆಗಳಿಗೆ ಎನ್ಐಎ ದಾಳಿ ನಡೆಸಿದೆ.
ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಅರೋಪಿಗಳು ಪಾಟ್ನಾ ದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ರ ಜೊತೆ ಸಂಪರ್ಕ ಹೊಂದಿ ಹಣಕಾಸಿನ ನೆರವು ಒದಗಿಸಿದ್ದಾರೆ ಎಂಬ ಆರೋಪದಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಎನ್.ಐ.ಎ ತಂಡ ಇಂದು ಸಂಜೆ ವೇಳೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ.

Leave a Response

error: Content is protected !!