ರಾಜ್ಯ

ಉಳ್ಳಾಲ – ಚೂರಿಯಿಂದ ಇರಿದು ಮಹಿಳೆಯ ಹತ್ಯೆ.

ಉಳ್ಳಾಲ ಮಾರ್ಚ್ 16: ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ನಡೆದಿದೆ.
ಮೃತ ಮಹಿಳೆ ದೆಹಲಿ ಮೂಲದವರು ಎಂದು ಹೇಳಲಾಗಿದ್ದು, ಈಕೆ ಜತೆಗಿದ್ದ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆ. ಎರಡು ದಿನಗಳ ಹಿಂದೆ ಕೋಟೆಪುರಕ್ಕೆ ಬಂದಿದ್ದ ಜೋಡಿ , ಸ್ಥಳೀಯ ಸೆಲೂನ್ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್ ಎಂಬವರ ಬಾಡಿಗೆ ಮನೆಯನ್ನು ಪಡೆದುಕೊಂಡಿದ್ದರು. ಮನೆಗೆ ಬರುವಾಗ ಬಟ್ಟೆ ವ್ಯಾಪಾರ ನಡೆಸುವವರು ಎಂದು ತಿಳಿಸಿದ್ದು, ಇನ್ನೇನು ಬಟ್ಟೆಗಳು ಬರಬೇಕಿದೆ ಎಂದು ತಿಳಿಸಿ ಮನೆಯಲ್ಲಿದ್ದರು. ಇಂದು ಸಂಜೆ ವೇಳೆ ಇಬ್ಬರೂ ಮನೆಯಿಂದ ಹೊರಬಾರದೇ ಇರುವುದನ್ನು ಗಮನಿಸಿ ಯುವಕನೋರ್ವ ಮನೆಯನ್ನು ಗಮನಿಸಿದಾಗ ಶೌಚಾಲಯದೊಳಕ್ಕೆ ಮಹಿಳೆ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Leave a Response

error: Content is protected !!