

ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ವಿದ್ಯಾರ್ಥಿಗಳ ಗುಂಪಿನೊಳಗೆ ವಾಗ್ವಾದ ನಡೆದು ಹೊಡೆದಾಡಿಕೊಂಡಿದ್ದ 8 ಮಂದಿ ಕಾಲೇಜು ವಿದ್ಯಾರ್ಥಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕ್ಷುಲ್ಲಕ ಕಾರಣವನ್ನು ಮುಂದಿರಿಸಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನಿಸಿ ಚದುರಿಸಲು ಯತ್ನಿಸಿದರೂ ವಿದ್ಯಾರ್ಥಿಗಳ ಗುಂಪು ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದರು.
ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳಾದ ಗಿರೀಶ್ (21) , ಅಭಿಷಿತ್(21) , ಧನುಷ್ (19) , ಮೋಹನ್ (19) ನಂದನ್ (19), ವಿನ್ಯಾಸ್ (18) , ರೂಪೇಶ್(20) ಹಿತೇಶ್(19), ಎಂಬವರನ್ನು ವಶಕ್ಕೆ ಪಡೆದು ಅವರ ವಿರುದ್ದ ಸಾರ್ವಜನಿಕ ಶಾಂತಿಭಂಗದ ಆರೋಪದನ್ವಯ ಭಾರತೀಯ ದಂಡ ಸಂಹಿತೆ 160 ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
add a comment