
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಉದ್ಘಾಟನೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ನಿವೃತ್ತ ಲೋಕಾಯುಕ್ತ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ಸಂತೋಷ್ ಹೆಗ್ಡೆಯವರು ನ.8 ರಂದು ಆಗಮಿಸಲಿದ್ದಾರೆ ಎಂದು ವಿದ್ಯಾಮಾತ ಅಕಾಡೆಮಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಚಂದ್ರಾವತಿ ಬಡ್ಡಡ್ಕ ಹೇಳಿದ್ದಾರೆ.ಅವರುನ.4 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಸೆ.28 ರಂದು ಸುಳ್ಯದಲ್ಲಿ ಶುಭಾರಂಭಗೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ನ.8 ರಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಗಾಗಿ ಪ್ರವೇಶಾತಿಯನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳಿಗಾಗಿ ತರಬೇತಿ ಪ್ರಾರಂಭಿಸಲಾಗುತ್ತದೆ. ಪ್ರಥಮ ಬ್ಯಾಚ್ ನ ತರಬೇತಿಯನ್ನು ಸಂತೋಷ್ ಹೆಗ್ಡೆಯವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದು ನಮ್ಮ ದೇಶದ ವಿವಿಧ ಸಮಸ್ಯೆಗಳ ಬಗ್ಗೆ ಭ್ರಷ್ಟಾಚಾರದ ಬಗ್ಗೆ ಸಂವಾದ ನಡೆಯುವುದು. ವಿದ್ಯಾರ್ಥಿಗಳ ಜತೆಗೆ ಸಾರ್ವಜನಿಕರು ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮದಲ್ಲಿ ನಿವೃತ್ತ ಮೇಜರ್ ಡಾ.ಕುಶ್ವಂತ್ ಕೋಳಿಬೈಲು, ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ವಿದ್ಯಾಮಾತ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಕೂಡಾ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಸ್ಟಿಯಲ್ಲಿ ಸುಳ್ಯ ಕಚೇರಿ ಆಡಳಿತಾಧಿಕಾರಿ ಚಂದ್ರಕಾಂತ್,ತರಬೇತುದಾರರಾದ ಡಾ.ಚೈತ್ರ ಮೊದಲಾದವರಿದ್ದರು.



