ರಾಜ್ಯ

ವಿಟ್ಲ: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ;
ಚಾಲಕ ಪಂಜ ಸುದರ್ಶನ್ ಸ್ಥಳದಲ್ಲೇ ಮೃತ್ಯು.!!

ವಿಟ್ಲ: ಚಾಲಕ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ
ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ
ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ.
ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.
ಆಟೋ ಸುದರ್ಶನ್ ಹಾಗೂ ಇನ್ನೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಪಲ್ಟಿಯಾಗಿದ್ದು , ಗಂಭೀರ ಗಾಯಗೊಂಡು ರಿಕ್ಷಾ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ.
ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪ ಸ್ವಲ್ಪ ಗಾಯವಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು, ವಿಟ್ಲ
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,
ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Response

error: Content is protected !!