ರಾಜ್ಯ

ವಿವೇಕಾನಂದರ ಜನ್ಮದಿನಾಚರಣೆಯ ಅಂಗವಾಗಿ ವಿವೇಕ ರಥ- ಯುವ ಪಥ- ಯುವ ಜಾಗೃತಿ ಜಾಥಾ.

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆಯುವ ವಿವೇಕ ರಥ ಯುವ ಪಥ..ಯುವ ಜಾಗೃತಿ ಜಾಥಾಕ್ಕೆ ಜ17.ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ಸ್ವಾಗತ ನೀಡಲಾಯಿತು. ದ.ಕ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್, ದ.ಕ.ಜಿಲ್ಲಾ ಯುವಜ‌ನ ಒಕ್ಕೂಟ ಮತ್ತು ಯುವಜನ ಸಂಯುಕ್ತ ಮಂಡಳಿ ಸುಳ್ಯ ಇವರ ಆಶ್ರಯದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿದ್ದು, ಸಭಾ ಕಾರ್ಯಕ್ರಮವನ್ನು ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ
ಮುಖ್ಯ ಭಾಷಣಕಾರರಾಗಿ ಅಜ್ಜಾವರ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಜೇಶ್ ಮೇನಾಲ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಸುಳ್ಯದ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ತೇಜಸ್ವಿ ಕಡಪಳ ವಹಿಸಿದ್ದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ನೋಡೆಲ್ ಅಧಿಕಾರಿ ಮಾಮಚ್ಚನ್,ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು,ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸತೀಶ್ ಕುಮಾರ್ ಕೊಯಿಂಗಾಜೆ, ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ, ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ,ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಅಬ್ದುಲ್ ಸಮದ್,ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯಶೋಧಾ ರಾಮಚಂದ್ರ ,ಭಾಗವಹಿಸಿದ್ದರು.


ಯುವಜನ ಸಂಯುಕ್ತ ಮಂಡಳಿ ಗೌರವಾಧ್ಯಕ್ಷ ದಯಾನಂದ ಕೇರ್ಪಳ ಉಪಸ್ಥಿತರಿದ್ದರು. ಯುವಜನ ಸಂಯುಕ್ತ ಮಂಡಳಿ ಉಪಾಧ್ಯಕ್ಷ ವಿಜಯಕುಮಾರ್ ಉಬರಡ್ಕ ಸ್ವಾಗತಿಸಿ, ಕಾರ್ಯದರ್ಶಿ ಸಂಜಯ ನೆಟ್ಟಾರು ವಂದಿಸಿದರು.‌ ಸಾಂಸ್ಕೃತಿಕ ಕಾರ್ಯದರ್ಶಿ ಆರ್.ಕೆ.ಮಹಮ್ಮದ್ ಕಾರ್ಯಕ್ರಮ ನಿರೂಪಿಸಿದರು.

Leave a Response

error: Content is protected !!