

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಆಫ್
ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅವರು
ಅನಾರೋಗ್ಯದಿಂದ ಡಿ.24 ರಂದು ನಿಧನರಾದರು ಸಂಹಿತಾ ಅವರು ಮಾಡಾವು ನಿವಾಸಿಯೆಂದು. ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ
ಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿ
ದಾಖಲಾಗಿದ್ದರು.ಡಿ.23 ರಂದು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು.ಡಿ.24ರಂದು
ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

add a comment