ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಅರ್ಜಿ ಸಲ್ಲಿಕೆ

ಪ್ರತಿಷ್ಠಿತ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಕೋರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಇಂದು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಧನಂಜಯರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ,ದ ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಪಿಸಿಸಿ ಸಂಯೋಜಕರಾಗಿ, ಇದೀಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾನ್ಯ ಕ್ಷೇತ್ರವಾದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ಕೆಪಿಸಿಸಿಗೆ ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ

add a comment